ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಸ್ವಂತ ಕಟ್ಟಡ ಹೊಂದಿದ 25 ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭಿಸಲು ಸರ್ಕಾರ ಅನುಮತಿ ನೀಡಿದ.
2024 -25 ನೇ ಸಾಲಿನಿಂದ 60 ಸಂಖ್ಯಾಬಲದ ವಿಜ್ಞಾನ ವಿಭಾಗ ಆರಂಭಿಸಲು ಮಂಜೂರಾತಿ ನೀಡಲಾಗಿದೆ. 2025 -26 ನೇ ಸಾಲಿನಿಂದ 60 ಸಂಖ್ಯಾಬಲದ ವಾಣಿಜ್ಯ ವಿಭಾಗ ಆರಂಭಿಸಲು ಅನುಮತಿ ನೀಡಲಾಗಿದೆ. ಅಗತ್ಯ ಹುದ್ದೆಗಳನ್ನು ಸೃಷ್ಟಿಸಿ ಈ ಹುದ್ದೆಗಳು ಭರ್ತಿಯಾಗುವ ತನಕ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಅನ್ವಯ ಅತಿಥಿ ಉಪನ್ಯಾಸಕರನ್ನು ಉಳಿದ ಇತರೆ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಬಹುದಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಈ ಸಂಬಂಧ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ.
ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಚರ್ಚೆ ನಡೆಸಿದಂತೆ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ, ಜನಪ್ರತಿನಿಧಿ ಬೇಡಿಕೆ, ಜಿಲ್ಲಾ ಕಚೇರಿಗಳ ವರದಿ, ಇತರೆ ಅಂಶಗಳನ್ನು ಪರಿಶೀಲಿಸಿ ಸ್ವಂತ ಕಟ್ಟಡ ಹೊಂದಿದ 25 ಅಲ್ಪಸಂಖ್ಯಾತ ಮೌಲಾನ ಆಜಾದ್ ಮಾದರಿ ಶಾಲೆಗಳನ್ನು ಉನ್ನತೀಕರಿಸಿ ಪದವಿ ಪೂರ್ವ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅಂತೆಯೇ ಈಗ ಪದವಿಪೂರ್ವ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ.