ಬೆಂಗಳೂರು: ಹಳ್ಳಿಗಳಲ್ಲಿ ಕಟ್ಟಡ ನಕ್ಷೆಗೆ ಅನುಮತಿ ಬೇಕಿಲ್ಲ. ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಗ್ರಾಮಾಂತರ ಪ್ರದೇಶದಲ್ಲಿ ಕಟ್ಟಡದ ನಕ್ಷೆಗಳಿಗೆ ಅನುಮೋದನೆ ಪಡೆಯುವುದರಿಂದ ವಿನಾಯಿತಿ ನೀಡುವ ಸಂಬಂಧ ಕರ್ನಾಟಕ ಮುನ್ಸಿಪಾಲಿಟಿಗಳ(ತಿದ್ದುಪಡಿ) ವಿಧೇಯಕ ಮಂಡಿಸಲಾಗಿದೆ.
ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರ ಪರವಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧೇಯಕ ಮಂಡಿಸಿದ್ದಾರೆ. ನಗರ ಪ್ರದೇಶಗಳೊಂದಿಗೆ ಗ್ರಾಮಾಂತರ ಪ್ರದೇಶದಲ್ಲಿ ಕಟ್ಟಡ ನಕ್ಷೆಗಳಿಗೆ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳಬೇಕಿದೆ. ಈ ವಿಧೇಯಕದ ಮೂಲಕ ಹಳ್ಳಿಗಳಲ್ಲಿ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯಲು ವಿನಾಯಿತಿ ನೀಡಲಾಗಿದೆ.