ನವದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಪೀಠದಲ್ಲಿ ನಡೆದಿದೆ.
ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರಿಗೆ, ಇದು ಆರ್ಟಿಕಲ್ 32 ರ ಅಡಿಯಲ್ಲಿ ಯಾವ ರೀತಿಯ ರಿಟ್ ಅರ್ಜಿಯಾಗಿದೆ ಎಂದು ಪ್ರಶ್ನಿಸಲಾಗಿದೆ.
8 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಯಾವುದೇ ಧರ್ಮವನ್ನು ಆಯ್ಕೆ ಮಾಡಲು ಅನುಮತಿಸುವಂತೆ ಯಾವುದೇ ಕಾರಣವಿಲ್ಲ ಎಂದು ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿ ವಜಾಗೊಳಿಸಿದೆ. 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಲು ಆಗದು, 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆಮಾಡಿಕೊಳ್ಳಲು ಸ್ವತಂತ್ರರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.. ಸಲ್ಲಿಕೆಯಾಗಿರುವ ಅರ್ಜಿ ಪಬ್ಲಿಸಿಟಿಗಾಗಿ ಸಲ್ಲಿಸಿದಂತೆ ಇದೆ ಎಂದು ಹೇಳಿದೆ.