ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ನೀಡಲಾಗುವ ಅರವಣ ಪ್ರಸಾದದಲ್ಲಿ ಕೀಟನಾಶಕ ಅಂಶವಿಲ್ಲ, ಪ್ರಸಾದ ಸೇವನೆಗೆ ಯೋಗ್ಯವಾಗಿದೆ ಎಂದು ಕೇಂದ್ರ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸಲಾಗಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ದಾಸ್ತಾನು ಮಾಡಿದ ಅರವಣ ಪ್ರಸಾದ ವಿತರಣೆಗೆ ಕೋರ್ಟ್ ಅನುಮತಿ ಕೋರುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಕೆ. ಅನಂತಗೋಪನ್ ಮಾಹಿತಿ ನೀಡಿದ್ದಾರೆ. ಪ್ರಸಾದದಲ್ಲಿ ಕೀಟನಾಶಕ ಮಿಶ್ರಿತ ಏಲಕ್ಕಿ ಬಳಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಮಾದರಿ ಪರೀಕ್ಷೆಯಲ್ಲಿ ಅರವಣ ಪ್ರಸಾದದಲ್ಲಿ ಕೀಟನಾಶಕ ಪತ್ತೆಯಾಗಿಲ್ಲ ಎಂದು ಗೊತ್ತಾಗಿದೆ.
ಅರವಣ ಪ್ರಸಾದ ನಿಷೇಧದಿಂದ ಉಂಟಾದ 6 ಕೋಟಿ ರೂ. ನಷ್ಟವನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ವಂ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.