ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಪತ್ನಿ ಸೇರಿ ನಾಲ್ವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪತ್ನಿ ನಿಕಿತಾ, ಅತ್ತೆ ನಿಶಾ, ಬಾಮೈದ ಅನುರಾಗ್ ಮತ್ತು ಸಂಬಂಧಿ ಸುಶೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಸಲಾಗಿದೆ.
ಪ್ರಚೋದನೆ ಆರೋಪದ ಅಂಶಗಳು ಇವೆ ಎಂದು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ತನಿಖೆಯ ಸಂದರ್ಭದಲ್ಲಿ ಕಲೆ ಹಾಕಿದ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅಭಿಯೋಜಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.