ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ದ್ವೇಷ ಭಾಷಣ ಮಾಡುತ್ತಿದ್ದಾರೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ ಅವರ ಸ್ಪರ್ಧೆಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಫಾತಿಮಾ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದು, ಜನಪ್ರತಿನಿಧಿ ಕಾಯ್ದೆ ಅಡಿ ನರೇಂದ್ರ ಮೋದಿಯವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದರು.
ಮಂಗಳವಾರದಂದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್.ಸಿ. ಶರ್ಮಾ ಅವರಿದ್ದ ಪೀಠ, ನಿಮ್ಮ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿತು. ಬಳಿಕ ಫಾತಿಮಾ ಅವರು ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.