alex Certify ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ

ಉಡುಪಿ: ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಸಂಭವಿಸಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಮಂಜೇಶಾ ಮಂಗೇಶ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದೆ.

ತಕ್ಷಣ ಎಚ್ಚೆತ್ತ ಸಿಬ್ಬಂದಿಗಳು ಜನರೇಟರ್ ನ್ನು ರಾಷ್ಟ್ರೀಯ ಹೆದ್ದಾರಿಯ ಮುಖ್ಯರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸಂಭವಿಸಲಿದ್ದ ಅನಾಹುತವೊಂದು ತಪ್ಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...