ಬೆಂಗಳೂರು: ತೈಲ ಬೆಲೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಹೇಳಿದ್ದಾರೆ. ಮೊದಲು ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಎಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಪೆಟ್ರೋಲ್ ಮೇಲಿನ ಸೆಸ್ ಯಾವಾಗ ಕಡಿಮೆ ಮಾಡುತ್ತೀರಿ? ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ತೈಲ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ? ಯಾವಾಗ ಇದನ್ನು ಕಡಿಮೆ ಮಾಡುತ್ತೀರಿ? ಎಂದು ಪ್ರಶ್ನಿಸಿದ ಅವರು, ಸೆಸ್ ನಿಂದ ಕೇಂದ್ರ ಸರ್ಕಾರ 27 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಹೇಳಿದ್ದಾರೆ.