ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ತೈಲ ಕಂಪನಿಗಳು ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ತಲಾ 15 ಪೈಸೆ ಇಳಿಕೆ ಮಾಡಿವೆ. 38 ದಿನಗಳಲ್ಲಿ ಎರಡನೇ ಬಾರಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.49 ರೂಪಾಯಿಯಾಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 88.92 ರೂಪಾಯಿಯಾಗಿದೆ. ಸೋಮವಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ.
ಇದಕ್ಕೂ ಮೊದಲು ಭಾನುವಾರ, ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಿತ್ತು. 36 ದಿನಗಳ ನಂತ್ರ ಮೊದಲ ಬಾರಿ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿತ್ತು. ಭಾನುವಾರ ಪೆಟ್ರೋಲ್ ಬೆಲೆ 20 ಪೈಸೆ ಇಳಿಕೆ ಕಂಡಿತ್ತು. ಡಿಸೇಲ್ ಬೆಲೆಯಲ್ಲೂ ಇಷ್ಟೇ ಇಳಿಕೆ ಕಂಡು ಬಂದಿತ್ತು.
ಪೆಟ್ರೋಲ್-ಡಿಸೇಲ್ ಬೆಲೆಗಳು ಅಂತರಾಷ್ಟ್ರೀಯ ಇಂಧನ ಬೆಲೆಯನ್ನು ಆಧಾರಿಸಿ ಬದಲಾಗುತ್ತವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗ್ತಿದ್ದಂತೆ ದೇಶದಲ್ಲಿ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ ಕಾಣುತ್ತದೆ.