ರಿಯಾದ್: ಕಚ್ಚಾ ತೈಲ ದರ ಮತ್ತೆ ಏರಿಕೆಯಾಗಿದೆ. ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ.
ತೈಲ ಉತ್ಪಾದನೆ ಹೆಚ್ಚಿಸದಿರಲು ಪೆಟ್ರೋಲಿಯಂ ಉತ್ಪನ್ನ ರಫ್ತುದಾರ ರಾಷ್ಟ್ರಗಳ ಒಕ್ಕೂಟ -ಒಪೆಕ್ ನಿರ್ಧರಿಸಿದೆ. ಇದರ ಬೆನ್ನಲ್ಲೇ ಡ್ರೋನ್ ದಾಳಿ ನಡೆದಿದೆ. ಸೌದಿ ನೇತೃತ್ವದ ಮಿತ್ರಪಡೆಗಳು ಯೆಮನ್ ಮೇಲೆ ವೈಮಾನಿಕ ಕಾರ್ಯಾಚರಣೆ ನಡೆಸಿದ ಪ್ರತೀಕಾರವಾಗಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ತೈಲಾಗಾರಗಳ ಮೇಲೆ ದಾಳಿ ಮಾಡಿದ್ದಾರೆ.
ಇದರ ಪರಿಣಾಮ ಬ್ರೆಂಟ್ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್ಸ್ 77.47 ಡಾಲರ್ಗೆ ಏರಿಕೆಯಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಶೇಕಡ 30 ರಷ್ಟು ಕಚ್ಚಾ ತೈಲ ದರ ಏರಿಕೆಯ ಪರಿಣಾಮ ಆಮದು ರಾಷ್ಟ್ರಗಳ ಮೇಲೆಯೂ ಪರಿಣಾಮ ಉಂಟಾಗಿದೆ. ತೈಲ ಉತ್ಪಾದನೆ ಕಡಿಮೆಯಾಗಿರುವುದರಿಂದ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಇಂಧನ ದರ ಮತ್ತಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ.