
ಚಿಕ್ಕಬಳ್ಳಾಪುರ: ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಸೌಮ್ಯ ಕ್ಲಿನಿಕ್ ಎದುರು ಗಿರೀಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕ್ಲಿನಿಕ್ ಎದುರಲ್ಲೇ ಆಟೋ ನಿಲ್ಲಿಸಿದ ಗಿರೀಶ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಸ್ಥಳೀಯರು ಕೂಡಲೇ ಬೆಂಕಿಯನ್ನು ನಂದಿಸಿ ಗಿರೀಶನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಿರೀಶನ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.