ವಿಜಯಪುರ: ಆದಾಯ ಕಡಿಮೆಯಾಗುತ್ತಿದೆ. ಅಭಿವೃದ್ಧಿ, ಗ್ಯಾರಂಟಿಗೆ ಹಣ ಬೇಕಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿ, ಆದಾಯ ಕಡಿಮೆಯಾಗುತ್ತಿದೆ. ಗ್ಯಾರಂಟಿ, ಅಭಿವೃದ್ಧಿಗೆ ಹಣ ಬೇಕಲ್ಲ. ಬೇರೆ ರಾಜ್ಯಗಳಲ್ಲಿನ ತೈಲ ದರ ತುಲನೆ ಮಾಡಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಅಭಿವೃದ್ಧಿ ಜನರಿಗಾಗಿ ಮಾಡುವುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡುತ್ತಿದ್ದೇವೆ. ವಿವಿಧ ವಸ್ತುಗಳ ದರ ಏರಿಕೆ ಬಗ್ಗೆ ಮೋದಿಯನ್ನು ನೀವು ಪ್ರಶ್ನಿಸಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಅನವಶ್ಯಕವಾಗಿ ನಾವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿಲ್ಲ ಎಂದು ಹೇಳಿದ್ದಾರೆ.