ಚಿಕ್ಕಮಗಳೂರು: ಪೆಟ್ರೋಲ್ ತುಂಬಿಸುವಾಗ ಕಾರ್ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಮುನ್ನೆಚ್ಚರಿಕೆ ಕ್ರಮದಿಂದಾಗಿ ಭಾರಿ ಅನಾಹುತ ತಪ್ಪಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಘಟ್ಟ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಬ್ಯಾಟರಿ ಸ್ಪೋಟಿಸಿ ಬೆಂಕಿ ತಗುಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ.