ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್ ನಿಂದ ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನ ಮುಗಿಬಿದ್ದ ಘಟನೆ ನಡೆದಿದೆ.
ಚಿಕ್ಕಹೊನ್ನಕುಣಿ ಗ್ರಾಮದ ಮಾರ್ಗವಾಗಿ ಸಾಗುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಪಲ್ಟಿಯಾದ ವಾಹನದಿಂದ ಪೆಟ್ರೋಲ್ ಸೋರಿಕೆಯಾಗಿದೆ. ಈ ವೇಳೆ ಜನ ಬಕೆಟ್, ಕೊಡ, ಬಾಟಲಿಗಳನ್ನು ಹಿಡಿದು ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಸ್ಥಳದಿಂದ ತೆರಳುವಂತೆ ಸೂಚನೆ ನೀಡಿದರೂ ಜನ ಚದುರಿರಲಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಜೋರಾಗಿ ನೀರು ಹರಿಸಿದರೂ ಜನ ಕದಲಲಿಲ್ಲ. ಕೊನೆಗೆ ಪೊಲೀಸರು ಜನರನ್ನು ಸ್ಥಳದಿಂದ ಕಳುಹಿಸುವಲ್ಲಿ ಹೈರಾಣಾಗಿದ್ದಾರೆ ಎನ್ನಲಾಗಿದೆ.