ತುಮಕೂರು: ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಿಸ್ಕೆರೆ ಗೇಟ್ ಬಳಿ ದುರಂತ ಸಂಭವಿಸಿದೆ.
ಕೂಲಿ ಕಾರ್ಮಿಕರಾದ ನಾಗರಾಜು(55), ರವಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ನಗರಸಭೆ ಮಾಜಿ ಸದಸ್ಯ ಪ್ರಸನ್ನಕುಮಾರ್ ಗೆ ಸೇರಿದ ಪೆಟ್ರೋಲ್ ಬಂಕ್ ಇದಾಗಿದೆ. ಸುರಕ್ಷತೆ ಕ್ರಮ ಕೈಗೊಳ್ಳದೆ ಪೆಟ್ರೋಲ್ ಟ್ಯಾಂಕ್ ಗೆ ಇಳಿಸಿದ್ದು, ಈ ವೇಳೆ ಉಸಿರುಗಟ್ಟಿ ಇಬ್ಬರು ಕೊನೆಯುಸಿರೆಳೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಟ್ಯಾಂಕ್ ನಿಂದ ಮೃತದೇಹ ಹೊರಗೆ ತೆಗೆದಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.