ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ಜಮೆಯಾಗುವ ನಿರೀಕ್ಷೆಯಲ್ಲಿದ್ದ ಖಾತೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ತಿಂಗಳ ಅಂತ್ಯಕ್ಕೆ ಜಮಾ ಮಾಡುವ ನಿರೀಕ್ಷೆ ಇದೆ.
ಶೇಕಡ 8.1 ರೂ. ಬಡ್ಡಿ ದರವನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪಿಎಫ್ ಖಾತೆದಾರರಿಗೆ ಕ್ರೆಡಿಟ್ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
ದೇಶದ 6 ಕೋಟಿ ಉದ್ಯೋಗಿಗಳು ಇದರಿಂದ ಪ್ರಯೋಜನ ಪಡೆಯಲಿದ್ದು, ವಾರ್ಷಿಕ ಬಡ್ಡಿ ದರವನ್ನು ಹೆಚ್ಚಳ ಮಾಡುವಂತೆ ಕೇಂದ್ರೀಯ ಟ್ರಸ್ಟಿಗಳ ಮಂಡಳಿ ಈ ಹಿಂದೆ ಶಿಫಾರಸ್ಸು ಮಾಡಿತ್ತು.