ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ 15 ರಾಜ್ಯಗಳಲ್ಲಿ ಪಿಎಫ್ಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಬಂಧಿಸಿದೆ.
ಪಿಎಫ್ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಕುರಿತು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್ಐ ನಿಷೇಧಿಸಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಈ ಬಗ್ಗೆ ಮಹತ್ವದ ಸಭೆ ನಡೆಸಲಿದ್ದು, ಪಿಎಫ್ಐ ನಿಷೇಧ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಪಿಎಫ್ಐ ನಿಷೇಧಕ್ಕೆ ಕಾನೂನು ಸಲಹೆ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.