ಬುಧವಾರದಂದು ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಅಂಗ ಸಂಸ್ಥೆಗಳು ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದ್ದು, ದೇಶದ ವಿವಿಧ ಭಾಗಗಳಲ್ಲಿದ್ದ ಕಚೇರಿಗಳಿಗೆ ಬೀಗ ಜಡಿಯಲಾಗಿತ್ತು.
ಅಲ್ಲದೆ ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾದ ವೆಬ್ ಸೈಟ್ ಸ್ಥಗಿತಗೊಳಿಸಲಾಗಿದ್ದು, ಇಂದು ಪಿಎಫ್ಐ ನ ಅಧಿಕೃತ ಟ್ವಿಟ್ಟರ್ ಖಾತೆ ಸೇರಿದಂತೆ ಅದರ ವಿವಿಧ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅನ್ವಯ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ನಿಷೇಧಿಸಲಾಗಿದ್ದು, ಇದರ ಹೊರತಾಗಿಯೂ ಪ್ರಚಾರ ಕಾರ್ಯ ಕೈಗೊಳ್ಳದಂತೆ ಕ್ರಮ ಕೈಗೊಳ್ಳುವ ಸಲುವಾಗಿ ವೆಬ್ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.