ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಪಿಎಫ್ಐ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬಯಲಾಗಿದೆ.
ಜುಲೈ 12 ರಂದು ಪ್ರಧಾನಿ ಮೋದಿ ಬಿಹಾರ ಭೇಟಿ ಸಂದರ್ಭದಲ್ಲಿ ಕೋಮು ದಂಗೆ ಸೃಷ್ಟಿಸಿ ಅವರ ಹತ್ಯೆಗೆ ಪಿಎಫ್ಐ ಸಂಚು ರೂಪಿಸಿತ್ತು ಎನ್ನುವುದು ಬಂಧಿತ ಪಿಎಫ್ಐ ಮುಖಂಡರ ವಿಚಾರಣೆ ಸಂದರ್ಭದಲ್ಲಿ ಗೊತ್ತಾಗಿದೆ.
ಸೆ. 22 ರಂದು ದೇಶಾದ್ಯಂತ 90ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ, ಇಡಿ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ದಾಳಿಯ ಸಂದರ್ಭದಲ್ಲಿ ಹಲವು ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಬಂಧಿತ ಮುಖಂಡ ಶಫೀಕ್ ಪಾಯೆಥ್ ಎಂಬಾತ ಪ್ರಧಾನಿ ಹತ್ಯೆಗೆ ಸಂಚು ರೂಪಿಸಿದ ಬಗ್ಗೆ ಬಾಯಿಬಿಟ್ಟಿದ್ದಾನೆ. ಕಳೆದ ಜು. 12 ರಂದು ಮೋದಿ ಬಿಹಾರಕ್ಕೆ ಭೇಟಿ ನೀಡಿದ್ದ ವೇಳೆ ಕೋಮು ಗಲಭೆ ಸೃಷ್ಟಿಸುವ ಮೂಲಕ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾನೆನ್ನಲಾಗಿದೆ.