ವಾಷಿಂಗ್ಟನ್: ಅಮೆರಿಕದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಒಪ್ಪಿಗೆ ನೀಡಲಾಗಿದೆ. 5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ.
ಫೈಜರ್ ಕಂಪನಿಯ ಲಸಿಕೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದಿಂದ ಈ ಬಗ್ಗೆ ಒಪ್ಪಿಗೆ ನೀಡಲಾಗಿದೆ.
ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದಿಂದ ವರದಿ ಪರಿಶೀಲಿಸಿದ್ದು, 5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಫೈಜರ್ ಕಂಪನಿಯ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಪ್ರಯೋಗ ಮತ್ತು ಅಧ್ಯಯನದಲ್ಲಿ ಲಸಿಕೆ ಸುರಕ್ಷಿತವಾಗಿದೆ ಎಂಬುದು ಸಾಬೀತಾದ ನಂತರ ಈ ಬಗ್ಗೆ ಸಲ್ಲಿಸಲಾದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.
ಆಹಾರ ಮತ್ತು ಔಷಧ ಆಡಳಿತದಿಂದ ಶುಕ್ರವಾರ 5 ರಿಂದ 11 ವರ್ಷ ವಯಸ್ಸಿನ ಮಕ್ಕಳಿಗೆ ಫೈಜರ್ ಲಸಿಕೆ ಪಡೆಯಲು ಅನುಮೋದನೆ ನೀಡಲಾಗಿತ್ತು. ಇದರಿಂದ ಅಮೆರಿಕದ 28 ಮಿಲಿಯನ್ ಗಿಂತಲೂ ಹೆಚ್ಚು ಮಕ್ಕಳು ಲಸಿಕೆ ಪಡೆಯಲಿದ್ದಾರೆ.