
ಬೆಂಗಳೂರು: ಪಿಜಿ ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಿಸಲಾಗಿದೆ.
ನವೆಂಬರ್ 12ರ ಮಧ್ಯಾಹ್ನ 2ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ಚಾಯ್ಸ್ ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.