ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿ –ಸಿಇಟಿ) ಮುಂದೂಡಲಾಗಿದೆ.
ಜುಲೈ 13 ರಂದು ಎಂಇ, ಎಂ ಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶ ಪರೀಕ್ಷೆ ನಿಗದಿಯಾಗಿತ್ತು. ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು 10ರಿಂದ ಆರಂಭವಾಗಲಿವೆ. ಹಾಗಾಗಿ ಪಿಜಿ –ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು. ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಜುಲೈ 7ರವರೆಗೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜುಲೈ 9ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ http://kea.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.