ಬೆಂಗಳೂರು : 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ – ಸಿಇಟಿ) ಮುಂದೂಡಲಾಗಿದೆ.
ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭವಾಗುತ್ತಿವೆ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಜುಲೈ 7ರ ಒಳಗೆ ಆನ್ಲೈನ್ ಮೂಲಕ ನೋಂದಣಿ ಮಾಡಬಹುದು. ಜುಲೈ 9ರ ಸಂಜೆ 6ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್ಸೈಟ್ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.