alex Certify ಸೆ.23, 24 ರಂದು `PG-CET’ ಪರೀಕ್ಷೆ : `KEA’ ಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.23, 24 ರಂದು `PG-CET’ ಪರೀಕ್ಷೆ : `KEA’ ಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿ ಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಎಂಬಿಎ, ಎಂ.ಇ, ಎಂಟೆಕ್, ಎಂ. ಅರ್ಕಿಟೆಕ್ಟರ್ ಕೋರ್ಸ್ ಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 ಮತ್ತು 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

 ಸೆಪ್ಟೆಂಬರ್ 23 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ ಎಂಇ, ಎಂ.ಟೆಕ್ ಮತ್ತು ಎಂ.ಆಕ್ ಪರೀಕ್ಷೆ ನಡೆಯಲಿದೆ. ಸೆ. 24ರಂದು ಬೆಳಗ್ಗೆ 10.30 ರಿಂದ ಎಂಸಿಎ ಮತ್ತು ಮಧ್ಯಾಹ್ನ 2.30 ರಿಂದ 4.30ರವೆಗೆ ಎಂಬಿಎ ಕೋರ್ಸ್ ಗಳಿಗೆ ಗರಿಷ್ಠ 100 ಅಂಕಗಳಿಗೆ ಪರೀಕ್ಷೆಗಳು ನಡೆಯಲಿವೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಕೋರ್ಸ್ ಗಳ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮೊದಲು ಸೆಪ್ಟೆಂಬರ್ 9 ಮತ್ತು 10 ರಂದು ನಿಗದಿಯಾಗಿದ್ದ ಪಿಜಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್ http://kea.kar.nic.ni ಗೆ ಭೇಟಿ ನೀಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...