
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಬಯಸಿದ ಅರ್ಹ ಅಭ್ಯರ್ಥಿಗಳ ದಾಖಲೆ ಸಲ್ಲಿಕೆಗೆ ಜನವರಿ 21ರವರೆಗೆ ಅವಕಾಶ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಸಲ್ಲಿಕೆಗೆ ಇದ್ದ ದಿನಾಂಕವನ್ನು ಜನವರಿ 21ರ ವರೆಗೆ ವಿಸ್ತರಿಸಿದೆ. ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಬಯಸಿದ ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ.
PG NEET-24 ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿರುವವರ ಮೂಲ ದಾಖಲೆಗಳ ಪರಿಶೀಲನೆ ಮತ್ತು ದಾಖಲೆ ಸಲ್ಲಿಸಲು ಜ.21ರವರೆಗೂ ದಿನಾಂಕ ವಿಸ್ತರಿಸಲಾಗಿದೆ. ಜ.18, 20 ಮತ್ತು 21ರಂದು ದಾಖಲೆಗಳ ಪರಿಶೀಲನೆ & ಸಲ್ಲಿಕೆಗೆ ಅವಕಾಶ ಇರುತ್ತದೆ ಎಂದು ತಿಳಿಸಲಾಗಿದೆ.
