ಬೆಂಗಳೂರು: ದೆಹಲಿಯ NBEMS ನಡೆಸುವ 2024ರ ಸಾಲಿನ ಪಿಜಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ 2024 ಕನಿಷ್ಠ ಅರ್ಹತೆಯ ಅಂಕ ಪರಿಷ್ಕರಣೆ ಮಾಡಿರುವುದರಿಂದ ಜನವರಿ 18ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 15 ಪರ್ಸೆಂಟೈಲ್ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಆನ್ಲೈನ್ ನೋಂದಣಿ, ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪೋರ್ಟಲ್ ಸಕ್ರಿಯಗೊಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜನವರಿಯ 18ರಂದು ಬೆಳಗ್ಗೆ 11 ಗಂಟೆ ಒಳಗೆ ಅವಕಾಶ ಬಳಸಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ಮಾಪ್ ಅಪ್ ಸುತ್ತಿನಲ್ಲಿ ಲಭ್ಯವಾಗುವ ಸೀಟುಗಳ ಹಂಚಿಕೆಗೆ ಮಾತ್ರ ಇತರೆ ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಬಹುದಾಗಿದೆ. ಇದುವರೆಗೂ ನೋಂದಣಿ ಮಾಡದಿರುವ ಪಿಜಿ ವೈದ್ಯಕೀಯ ಅರ್ಹ ಅಭ್ಯರ್ಥಿಗಳು ಸಹ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ನೀಟ್ ಪಿಜಿ- 2024 ಮಾಹಿತಿ ಪುಸ್ತಕದಲ್ಲಿ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇತರೆ ಮಾನದಂಡಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ(http://kea.kar.nic.in) ಪ್ರಕಟಿಸಲಾಗಿದೆ.