ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ತೋಟಗಾರಿಕೆ ಇಲಾಖೆ, ನಗರದ ವಿವಿಧ ಲಾಭರಹಿತ ಸಂಸ್ಥೆಗಳ ಸಹಯೋಗದೊಂದಿಗೆ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದ್ದು, ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ನೋಡುಗರ ಮನ ಸೂರೆಗೊಳಿಸಲಿದೆ.
ಈ ಬಾರಿ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆಯಿದ್ದು. ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಶಾಲಾ ಮಕ್ಕಳಿಗೆ ಪ್ರವೇಶ ಉಚಿತವಾಗಿರಲಿದೆ, ಹಾಗೂ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಿದ್ದೇವೆ ಎಂದರು. ಫ್ಲವರ್ ಶೋಗೆ ಈ ಬಾರಿ ಟಿಕೆಟ್ ದರ ಜಾಸ್ತಿ ಮಾಡಿಲ್ಲ. ಸಾಮಾನ್ಯ ದಿನಗಳಲ್ಲಿ ಹಿರಿಯರಿಗೆ 70 ರುಪಾಯಿ ಹಾಗೂ ಮಕ್ಕಳಿಗೆ 30 ರುಪಾಯಿ ನಿಗದಿ ಮಾಡಿದ್ದೇವೆ. ಭದ್ರತೆಗಾಗಿ 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಿದ್ದೇವೆ. ಏಕ-ಬಳಕೆಯ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸದಂತೆ, ಕಸವನ್ನು ಕಸದ ತೊಟ್ಟಿಗಳಲ್ಲಿ ಎಸೆಯದಂತೆ ಮತ್ತು ಕಾರ್ಯಕ್ರಮದ ಅಂತ್ಯದ ವೇಳೆಗೆ ಉದ್ಯಾನವು ಹಾಳಾಗದಂತೆ ನೋಡಿಕೊಳ್ಳಲು ನಾವು 150 ಗ್ರೌಂಡ್ ಸಿಬ್ಬಂದಿಯನ್ನು ನಿಯೋಜಿಸಲು ಯೋಜಿಸಿದ್ದೇವೆ ” ಎಂದು ಲಾಲ್ ಬಾಗ್ ನ ತೋಟಗಾರಿಕೆ ಉಪ ನಿರ್ದೇಶಕಿ ಕುಸುಮಾ ಜಿ ಹೇಳಿದರು.
12 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ಆಗಸ್ಟ್ 4ರಿಂದ ಆರಂಭವಾಗಲಿದೆ , ಕಳೆದ ವರ್ಷ ಈ ಕಾರ್ಯಕ್ರಮವು ಪ್ಲಾಸ್ಟಿಕ್ ರಹಿತ ಕಾರ್ಯಕ್ರಮವಾಗಿದ್ದರೂ, ಈ ವರ್ಷ ನಿಯಮಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಈ ಕಾರ್ಯಕ್ರಮದಲ್ಲಿ ಸ್ಟೀಲ್ ಬಾಟಲಿಗಳು ಅಥವಾ ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಗಳನ್ನು ಮಾತ್ರ ಅನುಮತಿಸಲಾಗುವುದು ಎಂದರು.