ಬೆಂಗಳೂರು : ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ 545 ಪಿಎಸ್ಐಗಳ ನೇಮಕಾತಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತದಲ್ಲಿ 403, ಆ ನಂತರ 660 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ಈ ಎರಡು ಹಂತಗಳ ನೇಮಕಾತಿಗೆ ಕಲ್ಬುರ್ಗಿ ಸೇರಿದಂತೆ ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕನ್ನಡಪರ ಸಂಘಟನೆಗಳ ಹೋರಾಟ ನ್ಯಾಯಯುತವಾಗಿದೆ. ಆದರೆ ಸ್ಥಳೀಯ ಭಾಷೆಗಳಲ್ಲಿ ಫಲಕಗಳಿದ್ದರೆ ಹೊರಗಿನವರಿಗೆ ಗೊತ್ತಾಗುವುದಿಲ್ಲ. ಆಗ ಮಾಹಿತಿ ತಿಳಿದುಕೊಳ್ಳಲು ಕಷ್ಟವಾಗುತ್ತದೆ ಎಂದರು.