alex Certify GOOD NEWS : 1,608 ‘PSI’ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ : ಗೃಹ ಸಚಿವ ಜಿ.ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : 1,608 ‘PSI’ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ 545 ಪಿಎಸ್ಐಗಳ ನೇಮಕಾತಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತದಲ್ಲಿ 403, ಆ ನಂತರ 660 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ಈ ಎರಡು ಹಂತಗಳ ನೇಮಕಾತಿಗೆ ಕಲ್ಬುರ್ಗಿ ಸೇರಿದಂತೆ ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕನ್ನಡಪರ ಸಂಘಟನೆಗಳ ಹೋರಾಟ ನ್ಯಾಯಯುತವಾಗಿದೆ. ಆದರೆ ಸ್ಥಳೀಯ ಭಾಷೆಗಳಲ್ಲಿ ಫಲಕಗಳಿದ್ದರೆ ಹೊರಗಿನವರಿಗೆ ಗೊತ್ತಾಗುವುದಿಲ್ಲ. ಆಗ ಮಾಹಿತಿ ತಿಳಿದುಕೊಳ್ಳಲು ಕಷ್ಟವಾಗುತ್ತದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...