alex Certify ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊಸ ನಿಯಮಾವಳಿ, ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದ ಯುಜಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊಸ ನಿಯಮಾವಳಿ, ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದ ಯುಜಿಸಿ

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿ.ಹೆಚ್.ಡಿ. ಬೇಡವೆಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ(ಯುಜಿಸಿ) ಹೇಳಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದು ಜಾರಿಗೊಳಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಈ ಬದಲಾವಣೆ ಮಾಡಲಾಗಿದೆ. ಹೊಸ ನಿಯಮಾವಳಿ 2021 ರ ಜುಲೈ 1 ರಿಂದ 2023 ರ ಜುಲೈ 1 ರ ವರೆಗೆ ಜಾರಿಯಲ್ಲಿರಲಿದೆ.

ಯಾವುದೇ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಯುಜಿಸಿ ನಿಯಮಗಳ ಪ್ರಕಾರ ಪಿ.ಹೆಚ್.ಡಿ. ಕಡ್ಡಾಯವಾಗಿದೆ. ಸದ್ಯಕ್ಕೆ ಈ ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಎರಡು ವರ್ಷಗಳ ಅವಧಿಗೆ ನೇಮಕಾತಿ ಪದ್ಧತಿಯಲ್ಲಿ ಬದಲಾವಣೆ ಮಾಡಲು ತೀರ್ಮಾನಿಸಿರುವುದಾಗಿ ಯುಜಿಸಿಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...