alex Certify ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ – 13 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ – 13 ಮಂದಿ ಸಾವು

ಫಿಲಿಡೆಲ್ಫಿಯಾ : ಕಟ್ಟಡದಲ್ಲಿ ಭೀಕರ ಅಗ್ನಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಾರಾಗಲು ಸಾಧ್ಯವಾಗದೆ 13 ಜನ ದುರಂತ ಅಂತ್ಯ ಕಂಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದಲ್ಲಿನ ಮೂರು ಅಂತಸ್ತಿನ ಕಟ್ಟಡದಲ್ಲಿನ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿನ ನಿರ್ಗಮನ ದಾರಿಯ ಮೂಲಕ ತಪ್ಪಿಸಿಕೊಳ್ಳಲು ಆಗದ ಕಾರಣ ಮಕ್ಕಳು ಸೇರಿದಂತೆ 13 ಜನ ಬಲಿಯಾಗಿದ್ದಾರೆ.

ಈ ಕಟ್ಟಡದಲ್ಲಿ ನಾಲ್ಕು ಸ್ಮೋಕ್ ಡಿಟೆಕ್ಟರ್‌ ಗಳು ಕೂಡ ಇದ್ದವು. ಆದರೆ, ಅವುಗಳು ವಿಫಲಗೊಂಡ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸುವಂತಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಘಟನೆಯ ಕುರಿತು ಮಾತನಾಡಿರುವ ಅಲ್ಲಿಯ ಮೇಯರ್ ಜಿಮ್ ಕೆನ್ನಿ, ಈ ಕಟ್ಟಡದಲ್ಲಿ 26 ಜನರು ವಾಸಿಸುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಇದು ನಾನು ನೋಡಿದ ಅತ್ಯಂತ ಭಯಾನಕ ಘಟನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...