
ಬೆಂಗಳೂರು: ನನ್ನ ಫೋನ್ ಟ್ಯಾಪ್ ಆಗಿದೆ. ವಿಪಕ್ಷ ನಾಯಕರ ಎಲ್ಲರ ಫೋನ್ ಟ್ಯಾಪಿಂಗ್ ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ನನ್ನ ಫೋನ್ ಟ್ಯಾಪಿಂಗ್ ಆಗಿರುವುದು ನಿಜ. ವಿಪಕ್ಷದ ಬಹುತೇಕ ನಾಯಕ ಫೋನ್ ಟ್ಯಾಪಿಂಗ್ ಆಗಿದೆ. ಇದರಲ್ಲಿ ಅನುಮಾನವೇ ಇಲ್ಲ. ಸಿದ್ದರಾಮಯ್ಯ ಸರ್ಕಾರ ಬಂದಾಗಿನಿಂದಲೂ ಫೋನ್ ಟ್ಯಾಪಿಂಗ್ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಹನಿಟ್ರ್ಯಾಪ್ ಪ್ರಕರಣದ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಸಿಎಂ ಸಿದ್ದರಾಮ್ಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆದಿದೆ. ನಾವು ತನಿಖೆ ನಡೆಸಿ ಎಂದು ಪ್ರತಿಭಟನೆ ನಡೆಸಿದೆವು. ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನಮ್ಮ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ ಎಂದು ಕಿಡಿಕಾರಿದರು.