
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರಿ ಚರ್ಚೆಯಲ್ಲಿರುವಾಗಲೇ ಸಚಿವರು, ಶಾಸಕ ಫೋನ್ ಕದ್ದಾಲಿಕೆ ಆರೋಪಗಳು ಕೇಳಿಬರುತ್ತಿವೆ. ವಿಪಕ್ಷ ನಾಯಕ ಆರ್.ಅಸೋಕ್ ನನ್ನ ಫೋನ್ ಟ್ಯಾಪ್ ಆಗಿದೆ. ಮಾತ್ರವಲ್ಲ ವಿಪಕ್ಷದ ಹಲವರ ಫೋನ್ ಟ್ಯಾಪಿಂಗ್ ಆಗಿದೆ ಎಂದು ಹೇಳಿದ್ದರು. ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಈಗಾಗಲೇ ಹಲವು ಸಚಿವರು, ಶಾಸಕರು ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಫೋನ್ ಟ್ಯಾಪಿಂಗ್ ಪ್ರಕರಣದ ಬಗ್ಗೆ ಈವರೆಗೆ ಯಾರೂ ದೂರು ನೀಡಿಲ್ಲ. ಫೋನ್ ಟ್ಯಾಪಿಂಗ್ ವಿಚಾರವಾಗಿ ಈವರೆಗೆ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಸರ್ಕಾರ , ಇಂಟಲಿಜನ್ಸ್ ಏಜೆನ್ಸಿಗಳು ಫೋನ್ ಟ್ಯಾಪ್ ಮಾಡಬಹುದು. ತನಿಖೆ ಭಾಗವಾಗಿ ಮಡಬಹುದು. ಫೋನ್ ಟ್ಯಾಪ್ ಬಗ್ಗೆ ನಾನಾಗಲಿ, ಸಿಎಂ ಆಗಲಿ ಹೇಳಿಲ್ಲ. ನಮಗೆ ಇದರ ಅಗತ್ಯವೂ ಇಲ್ಲ ಎಂದು ಹೇಳಿದರು. ಒಂದು ವೇಳೆ ಈ ಬಗ್ಗೆ ದೂರು ಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು,