ಧಾರವಾಡ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಲ್ಲಿ ಮಹಾತ್ಮಾ ಗಾಂಧೀಜಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಅಳವಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಲ್ಲಿ ಕಡ್ಡಾಯವಾಗಿ ಕೂಡಲೇ ಜಾರಿಗೆ ಬರುವಂತೆ ಮಹಾತ್ಮ ಗಾಂಧೀಜಿ, ಬಸವಣ್ಣನವರ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸಬೇಕೆಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿ, ಜಿಲ್ಲಾಧಿಕಾರಿಗಳು ಸೂತ್ತೋಲೆ ಹೊರಡಿಸಿದ್ದಾರೆ.