alex Certify ಯುವತಿಯೊಂದಿಗೆ ಸಲುಗೆಯಿಂದಿದ್ದ ಕಿಡಿಗೇಡಿಯಿಂದ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯೊಂದಿಗೆ ಸಲುಗೆಯಿಂದಿದ್ದ ಕಿಡಿಗೇಡಿಯಿಂದ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಯುವತಿ ಮದುವೆಯಾಗುವುದಾಗಿ ನಂಬಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಕುಮಾರ್ ಬಂಧಿತ ಆರೋಪಿ. ಮ್ಯಾಟ್ರಿಮೋನಿಯಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದ ವಿಜಯಕುಮಾರ್ ಮದುವೆಯಾಗುವುದಾಗಿ ಹೇಳಿ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಯುವತಿ ಜೊತೆ ಕೆಲವು ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ. ಹಣ ಕೊಡದಿದ್ದರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಹಣ ನೀಡದ ಹಿನ್ನೆಲೆ ಯುವತಿ ಹೆಸರಲ್ಲಿ ಇನ್ಸ್ಟಾಗ್ರಾಂ ನಲ್ಲಿ ಮೂರು ಖಾತೆಗಳನ್ನು ತೆರೆದಿದ್ದ ಆರೋಪಿ ವಿಜಯಕುಮಾರ್ ಇಬ್ಬರ ಫೋಟೋವನ್ನು ಯುವತಿ ಕುಟುಂಬಸ್ಥರಿಗೆ ಟ್ಯಾಗ್ ಮಾಡಿದ್ದ. ಫೋಟೋಗಳನ್ನು ಡಿಲೀಟ್ ಮಾಡಲು 50 ಸಾವಿರ ರೂಪಾಯಿ ಪಡೆದುಕೊಂಡಿದ್ದ. ಬಳಿಕ ಪದೇಪದೇ ಯುವತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿರ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...