
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕೂಡ ಸಹ ಶಿಕ್ಷಕರು ಎಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಸೇರಿ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತಾಗಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಅಗತ್ಯ ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ. ದೈಹಿಕ SikfxN ಶಿಕ್ಷಕರನ್ನು ಕೂಡ ಸಹ ಶಿಕ್ಷಕರೆಂದು ಪರಿಗಣಿಸಿ ಸೌಲಭ್ಯ ಕಲ್ಪಿಸಲು ಸೂಚನೆ ನೀಡಿದ್ದಾರೆ.