ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಫೋಟೋ ಒಂದು ಭಾರೀ ವೈರಲ್ ಆಗಿದೆ.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಅಧಿಕೃತ ಟ್ವಿಟರ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿರುವ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಇದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನವನ್ನು ಗುರುವಾರದಂದು ಮುಂದೂಡಲಾಗಿದ್ದು, ಇದೀಗ ಕುತೂಹಲಕಾರಿ ಚಿತ್ರವೊಂದು ವೈರಲ್ ಆಗುತ್ತಿದೆ.
ನವದೆಹಲಿಯ ಸಂಸತ್ತಿನ ಸಂಕೀರ್ಣದೊಳಗೆ ಪ್ರಧಾನಿ ಮೋದಿ ಮತ್ತು ರಾಜನಾಥ್ ಸಿಂಗ್ ಸಂಸದರನ್ನು ಭೇಟಿಯಾದ ಹಲವು ಫೋಟೋಗಳನ್ನು ಓಂ ಬಿರ್ಲಾ ಹಂಚಿಕೊಂಡಿದ್ದಾರೆ. ಸಭೆಯಲ್ಲಿದ್ದವರಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೇರಿದ್ದಾರೆ.
ಸದನದ ಘನತೆಯನ್ನು ಹೆಚ್ಚಿಸುವ ಸಲುವಾಗಿ ಚರ್ಚೆಗಳು ಮತ್ತು ಸಂವಾದಗಳ ಮಟ್ಟವನ್ನು ಹೆಚ್ಚಿಸುವಲ್ಲಿ ಸಾಮೂಹಿಕ ಪ್ರಯತ್ನಗಳು ಅಗತ್ಯವೆಂದು ನಾನು ಗೌರವಾನ್ವಿತ ನಾಯಕರನ್ನು ಒತ್ತಾಯಿಸಿದೆ. ಈ ಪ್ರಯತ್ನದಲ್ಲಿ ಎಲ್ಲಾ ಪಕ್ಷಗಳು ಸಕ್ರಿಯವಾಗಿ ಸಹಕರಿಸುತ್ತವೆ ಎಂಬುದು ನನ್ನ ಪ್ರಾಮಾಣಿಕ ಆಶಯವಾಗಿದೆ ಎಂದು ಓಂಬಿರ್ಲಾ ಅವರು ಬರೆದುಕೊಂಡಿದ್ದಾರೆ.