
ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.
ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ ಯಮುನಪ್ಪ (60) ಮೃತ ದುರ್ದೈವಿಗಳು. ಮುರುಗೇಶ್ ಹೆಚ್ ಡಿ ಎಪ್ ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಕಲಬುರಗಿ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.