ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಬುಧವಾರ ರಾತ್ರಿ ಅವರ ಬಾಂದ್ರಾ ನಿವಾಸದಲ್ಲಿ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು. ಈ ಘಟನೆಯಲ್ಲಿ ನಟನ ಬೆನ್ನಿನಲ್ಲಿ ಚಾಕು ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದರು.
ಶಂಕಿತ ಆರೋಪಿಯನ್ನು ಪೊಲೀಸರು ಈಗ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಇದರ ಮಧ್ಯೆ ಸೈಫ್ ಆಲಿಖಾನ್ ಅವರಿಗೆ ಚುಚ್ಚಿದ ಚಾಕುವಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಲೀಲಾವತಿ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಚಾಕುವನ್ನು ತೆಗೆಯಲಾಗಿದ್ದು, ಸೈಫ್ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಟನ ಬೆನ್ನಿನ ಜೊತೆಗೆ ಕೈ ಮತ್ತು ಕುತ್ತಿಗೆಗೂ ಗಾಯಗಳಾಗಿವೆ.
ಈ ಘಟನೆಯಲ್ಲಿ ಸೈಫ್ ಆಲಿಖಾನ್ ಮನೆಯಲ್ಲಿ ಕೆಲಸ ಮಾಡುವ ನರ್ಸ್ ಮತ್ತು ಗೃಹ ಸಹಾಯಕಿ ಕೂಡ ಗಾಯಗೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರ ಆರೋಗ್ಯದಲ್ಲಿ ಈಗ ಸುಧಾರಣೆ ಕಂಡುಬಂದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆದಾಗ್ಯೂ, ಬೆನ್ನಿನ ಗಾಯದ ಕಾರಣದಿಂದ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.
ಪೊಲೀಸರು ಈ ಘಟನೆಯ ಕುರಿತು ತೀವ್ರ ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಉದ್ದೇಶ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಈ ಘಟನೆಯು ಬಾಲಿವುಡ್ನಲ್ಲಿ ಆಘಾತವನ್ನುಂಟು ಮಾಡಿದ್ದು, ನಟನ ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳಲು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.