ಬೆಂಗಳೂರು: ಲಸಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಲಸಿಕೆ ಕಡ್ಡಾಯ ಮಾಡಿ 2020ರ ಜುಲೈ 16ರಂದು ಸರ್ಕಾರ ಹೊರಡಿಸಿದ ಸುತ್ತೋಲೆ ನಾಗರೀಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಕೊರೋನಾ ಮೊದಲನೆ ಅಲೆಯ ಸಂದರ್ಭದಲ್ಲಿ ಶಿಕ್ಷಕರು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊದಲನೇ ಡೋಸ್ ಕಡ್ಡಾಯಗೊಳಿಸಲಾಗಿತ್ತು.
ಈ ಕುರಿತಾಗಿ ಮಂಗಳೂರಿನ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಮೊದಲಾದವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರಿಶೀಲನೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ. ಸರ್ಕಾರಕ್ಕೆ ಈ ವಿಚಾರದಲ್ಲಿ ನಿರ್ದೇಶನ ನೀಡಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟಿದೆ.
ಅಲ್ಲದೆ, ಕೊರೋನಾ ನಿಯಂತ್ರಣ, ನಿರ್ವಹಣೆ ಮತ್ತು ಚಿಕಿತ್ಸೆ ಕುರಿತಂತೆ ಸಲ್ಲಿಕೆಯಾಗಿದ್ದ 20 ಪಿಐಎಲ್ ಗಳ ವಿಚಾರಣೆ ನಡೆಸಲಾಗಿದ್ದು, 17 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.