ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪೂರ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಬೆಳೆನಷ್ಟ ವಿಮೆ ಪರಿಹಾರ ನೀಡದ ಕಾರಣಕ್ಕೆ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಸಲಾಗಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಖಾಸಗಿ ಲೇವಾದೇವಿಗಾರರಿಂದ ಸಾಲ ಪಡೆದು ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡುವ ಯೋಜನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಒಂದು ವಾರದೊಳಗೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.