
ಬೆಂಗಳೂರು: ಸಾರಿಗೆ ಬಸ್ ಗಳಲ್ಲಿ ವಿಕಲಚೇತನರು, ಅಂಧರಿಗೆ ಸೌಲಭ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ.
ಬಸ್ ಗಳಲ್ಲಿ ನಿಲ್ದಾಣದ ಧ್ವನಿ ಸಹಿತ ಮಾಹಿತಿಗೆ ಸೂಚನೆ ನೀಡಲಾಗಿದೆ. ಖಾಸಗಿ ಸಾರಿಗೆ ಬಸ್ ಗಳಲ್ಲಿಯೂ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸೂಚನೆ ನೀಡಿದೆ. ಎನ್. ಶ್ರೇಯಸ್ ಎಂಬುವವರು ಪಿಐಎಲ್ ದಾಖಲಿಸಿದ್ದರು.