ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್ ಸಲ್ಲಿಸಲಾಗಿದೆ. ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಇದೇ ಮನವಿಯ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ 12 ವಾರ ಮುಂದೂಡಿದೆ. ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮಕ್ಕೆ ಕೋರಿದ್ದರು. ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬೊಕ್ಕಸದ ಹಣ ದೇಶದ ಅಭಿವೃದ್ಧಿ ಬದಲಿಗೆ ಆಮಿಷಕ್ಕೆ ಬಳಕೆ ಆಗುತ್ತಿದೆ. ಮತದಾರರಿಗೆ ಆಮಿಷವೊಡ್ಡಿ ಮತ ಕೇಳುವುದು ಸಂವಿಧಾನ ಬಹಿರವಾಗಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರೂಪಿಸಲು ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.