ತಿರುವನಂತಪುರಂ: ದೇಶದ ಗಮನಸೆಳೆದಿದ್ದ ಚಿನ್ನ 30 ಕೆಜಿ ಕಳ್ಳಸಾಗಣೆ ಪ್ರಕರಣದಲ್ಲಿ ಸಿಎಂ ಪಿಣರಾಯಿ ವಿಜಯನ್ ಪಾತ್ರವಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಕೇರಳ ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯುಎಇ ಇಂದ ರಾಜತಾಂತ್ರಿಕ ಮಾರ್ಗದಲ್ಲಿ 30 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿತ್ತು. ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಕರಣದ ತನಿಖೆ ಕೈಗೊಂಡಿದ್ದ ಕಸ್ಟಮ್ಸ್ ಅಧಿಕಾರಿಗಳು ಪ್ರಮುಖ ಆರೋಪಿ ಸ್ವಪ್ನಾಸುರೇಶ್ ಸೇರಿದಂತೆ ಹಲವರನ್ನು ಬಂಧಿಸಿದ್ದು, ಅವರ ಹೇಳಿಕೆ ಆಧರಿಸಿ ಅಫಿಡವಿಟ್ ಸಲ್ಲಿಸಲಾಗಿದೆ.
ಚಿನ್ನ ಕಳ್ಳಸಾಗಣೆ ಬಗ್ಗೆ ಸಿಎಂ ಪಿಣರಾಯಿ ವಿಜಯನ್, ಮೂವರು ಸಚಿವರು ಮತ್ತು ಸ್ಪೀಕರ್ ಗೆ ಮೊದಲೇ ತಿಳಿದಿತ್ತು ಎಂದು ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್ ಗೆ ತಿಳಿಸಿದೆ.