
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಗೃಹ ಬಂಧನ ವಿಧಿಸಲಾಗಿದೆ. ಈ ಕುರಿತು ಸ್ವತಃ ಮೆಹಬೂಬಾ ಮುಫ್ತಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಗೃಹ ಬಂಧನವನ್ನು ಪ್ರಸ್ತಾಪಿಸಿರುವ ಮೆಹಬೂಬಾ ಮುಫ್ತಿ, ಅಫ್ಘಾನಿಸ್ತಾನ ಜನತೆ ಹಕ್ಕುಗಳ ಕುರಿತು ಭಾರತ ಸರ್ಕಾರ ಕಳವಳ ವ್ಯಕ್ತಪಡಿಸುತ್ತದೆ. ಆದರೆ, ಜಮ್ಮು ಕಾಶ್ಮೀರ ಜನತೆ ವಿಷಯದಲ್ಲಿ ಮಾತ್ರ ಇದನ್ನು ಮರೆಯುತ್ತದೆ ಎಂದು ಟೀಕಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದೆ ಎಂದು ಹೇಳಲಾಗುತ್ತಿದ್ದರೂ ತಮ್ಮ ಗೃಹ ಬಂಧನದಿಂದಾಗಿ ಇದು ಸುಳ್ಳು ಎಂಬುದು ಸಾಬೀತಾಗುತ್ತಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.