ಬೆಳಗಾವಿ: ರಾಮನಗರದ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಮದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ದೇವಸ್ಥಾನದ ಅಭಿವೃದ್ಧಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ ಎಂದರು.
ರಾಮನಗರ ನಾಮಕರಣ ಆಗಿರುವುದೇ ರಾಮನ ಹೆಸರಿನಲ್ಲಿ. ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ಭರವಸೆ ನೀಡಿದ್ದಾರೆ. ರಾಮನಗರದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತೇವೆ. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲಿಯೂ ರಾಮ ಮಂದಿರ ನಿರ್ಮಾಣ ಆಗುತ್ತದೆ ಎಂಬ ವಿಶ್ವಾಸವಿದೆ. ಬರುವ ಬಜೆಟ್ ನಲ್ಲಿ ಸಿಎಂ ಮಂದಿರಕ್ಕಾಗಿ ಹಣ ಘೋಷಣೆ ಮಾಡಬಹುದು ಎಂದರು.
ರಾಮ ದೇವರ ಬೆಟ್ಟದಲ್ಲಿರುವ ರಾಮ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಹೇಳಿದರು.