ಬೆಂಗಳೂರು : ಡಿಸೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.
ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗಾರರರಿಗೆ ಪ್ರತಿಕ್ರಿಯೆ ನೀಡಿದರು. ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ದವಾಗಿದೆ. ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ. ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಕಳೆದ ಎರಡು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆ ಮೇಲೆ ಆಡಳಿತಾರೂಢ ಕಾಂಗ್ರೆಸ್ ಕಣ್ಣಿಟ್ಟಿದೆ. ಬಿಬಿಎಂಪಿ ಚುನಾವಣೆ ಕೋವಿಡ್ ಕಾರಣವೂ ಸೇರಿ ಹಲವು ಕಾರಣಗಳಿಂದ ಎರಡು ವರ್ಷಕ್ಕೂ ಹೆಚ್ಚು ಸಮಯ ವಿಳಂಬವಾಗಿದೆ.