ಬೆಂಗಳೂರು : ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂಬ ದೂರು ಕೇಳಿದ್ದು, ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮಾಧ್ಯಮಗಳಲ್ಲಿ ಬಂದಿರುವಂತೆ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆಯಾಗಿದೆ ಎಂಬುದು ಸುಳ್ಳು ಎಂದು ಹೇಳಿದರು. ಸಮಗ್ರ ಶಿಶು ಅಭಿವೃದ್ದಿ ಸೇವೆಗಳು ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಪಡಿತರ ಅಂಗಡಿಗಳ ಮೂಲದ ಸಾರವರ್ಧಿತ ಅಕ್ಕಿಯನ್ನು ಪೂರೈಸುತ್ತಿದೆ , ಇದನ್ನೇ ಪ್ಲಾಸ್ಟಿಕ್ ಅಕ್ಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದರು. ಕೇಂದ್ರದ ಸೂಚನೆ ಮೇರೆಗೆ ಸಾರವರ್ದಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ ಎಂದರು.
ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು’, ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ವೈದ್ಯಕೀಯ ಸೇವೆಗೆ ಪ್ರತ್ಯೇಕ ಪಡಿತರ ಚೀಟಿ ನೀಡಲು ಚಿಂತನೆ ನಡೆಸಲಾಗಿದೆ , ಮನೆ ಮನೆ ಸರ್ವೆ ಮಾಡಿ ಸಲಹೆ ಪಡೆದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಆಹಾರ ಮತ್ತು ನಾಗರಿಕ ಸರಬರಾಜುs ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಆರೋಗ್ಯ ಸೇವೆಗಾಗಿಯೇ ಪ್ರತ್ಯೇಕ ಪಡಿತರ ಚೀಟಿ ನೀಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮನೆ ಮನೆ ಸರ್ವೆ ಮಾಡಿ ಸಲಹೆ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಎಷ್ಟು ಜನ ಅಕ್ಕಿ ಮತ್ತು ಆರೋಗ್ಯ ಸೇವೆ ಎರಡನ್ನೂ ಕೂಡ ಬಯಸುತ್ತಾರೆ ಎಂಬುದು ಗೊತ್ತಾಗಲಿದೆ ಎಂದರು.