ಬೆಂಗಳೂರು: ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆಯ ವದಂತಿ ಹರಡಿದೆ. ಹಿನ್ನಕ್ಕಿ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಿನ್ನಕ್ಕಿ ಗ್ರಾಮದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಆರೋಗ್ಯಧಿಕಾರಿ ಪ್ಲಾಸ್ಟಿಕ್ ಎಂದು ಹೇಳಲಾದ ಅಕ್ಕಿಯನ್ನು ತಿಂದು ತೋರಿಸಿದ್ದಾರೆ. ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಕ್ಕಿಯನ್ನು ತಿಂದು ತೋರಿಸಿದ್ದು, ಪ್ಲಾಸ್ಟಿಕ್ ಅಕ್ಕಿ ವಿತರಿಸಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ.