ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಇಕ್ಕಟ್ಟಿನಲ್ಲಿ ಸಿಲುಕಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಬ್ಬರೂ ಗುವಾಹಟಿಗೆ ಹೋಗುವ ವಿಮಾನದಲ್ಲಿದ್ದು, ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಬಿಸಿಬಿಸಿ ಚರ್ಚೆ ನಡೆದಿದೆ.
ʼಇಂಧನ ದರʼ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕನಿಂದ ಕುದುರೆ ಏರಿ ಪ್ರತಿಭಟನೆ
ಎಲ್‌ಪಿಜಿ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವರನ್ನು ಪ್ರಶ್ನಿಸಿದಾಗ ಕೇಂದ್ರವು ವಿವಿಧ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ನಾಯಕಿ ವ್ಯಂಗ್ಯವಾಗಿ ಕುಟುಕುತ್ತಾರೆ.
ಕಾಂಗ್ರೆಸ್ ನಾಯಕಿಯ ವ್ಯಂಗ್ಯಕ್ಕೆ ಪ್ರತಿಕ್ರಿಯೆಯಾಗಿ ಸ್ಮೃತಿ, ಸರ್ಕಾರವು ದೇಶವಾಸಿಗಳಿಗೆ ಉಚಿತ ಪಡಿತರವನ್ನು ನೀಡುತ್ತಿದೆ. 1.83 ಶತಕೋಟಿ ಜನರಿಗೆ ಉಚಿತ ಲಸಿಕೆಗಳನ್ನು ನೀಡುತ್ತಿದೆ ಎಂದು ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು.
ಅಡುಗೆ ಅನಿಲ ಮತ್ತು ಗ್ಯಾಸ್ ಇಲ್ಲದ ಸ್ಟೌಗಳ ಕೊರತೆಯ ಬಗ್ಗೆ ಕಾಂಗ್ರೆಸ್ ನಾಯಕಿ ಕೇಳಿದಾಗ ಸಚಿವರು ದಯವಿಟ್ಟು ಸುಳ್ಳು ಹೇಳಬೇಡಿ ಎಂದು ಹೇಳುತ್ತಾರೆ.